ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದ್ದು, ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಹೇಳಿದ್ದಾರೆ. ಈ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ ಭಾಷಣದ ಬದಲು ತಾವೇ ಸಿದ್ಧಪಡಿಸಿದ ಭಾಷಣ ಓದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
ಸರ್ಕಾರದ ಸಣ್ಣತನದಿಂದಾಗಿ ಕರ್ನಾಟಕದಲ್ಲಿ ಇಂತಹದೊಂದು ಪ್ರಕರಣ ಮೊದಲು ಬಾರಿಗೆ ನಡೆದಿದೆ. ತನ್ನ ತಪ್ಪುಗಳನ್ನು ಮರೆಮಾಚಲು ಈ ಸರ್ಕಾರ ಅಧಿವೇಶನ ದುರುಪಯೋಗ ಪಡಿಸಿಕೊಂಡಿದೆ. ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಚಾರಗಳನ್ನು ಸರ್ಕಾರ ಮತ್ತು ಮಂತ್ರಿಗಳು ರಾಜ್ಯಪಾಲರ ಮೂಲಕ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಇಂತಹ ಘಟನೆ ನಡೆದಿದೆ ಅಂತಾ ಹೇಳಿದ್ದಾರೆ.




