ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಜಿಲ್ಲೆಯ ಕೊರಟಗೆರೆ ತಾಲೂಕಿನ ವ್ಯಾಪ್ತಿಯಲ್ಲಿ ಸಿಕ್ಕ ಶವದ ತುಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜಾಡು ಹಿಡಿದಿದ್ದಾರೆ. ಕೊಲೆಯಾದ ಮಹಿಳೆ ಲಕ್ಷ್ಮಿದೇವಮ್ಮ ಅಳಿಯನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ದಂತವೈದ್ಯ ಡಾ.ರಾಮಚಂದ್ರ ತನ್ನ ಸ್ನೇಹಿತರಾದ ಸತೀಶ್ ಹಾಗೂ ಕಿರಣ್ ಜೊತೆ ಸೇರಿಕೊಂಡು ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.
ಕೋಳಾಲದಲ್ಲಿ ಇರುವ ಸ್ನೇಹಿತ ಸತೀಶಗೆ ಸೇರಿದ ಫಾರ್ಮ್ ಹೌಸ್ ನಲ್ಲಿ ಕೊಲೆ ಮಾಡಿ, ನಂತರ ಮೃತದೇಹದ ಭಾಗಗಳನ್ನು ತುಂಡು ತುಂಡಾಗಿ ಮಾಡಿ ಎಲ್ಲೆಂದರಲ್ಲಿ ಎಸೆಯಲಾಗಿದೆ. ಈ ಪ್ರಕರಣ ಸಂಬಂಧ ಕೊರಟಗೆರೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.