ಪ್ರಜಾಸ್ತ್ರ ಸುದ್ದಿ
ದಕ್ಷಿಣ ಕನ್ನಡ*(Dakshina Kannada): ಹಿಂದು ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆ ವಿಮಾನ ನಿಲ್ದಾಣದ ಹತ್ತಿರ, ಬಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ಕೃತ್ಯದಿಂದಾಗಿ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 5ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದಕ್ಷಿಣ ಜಿಲ್ಲೆಯ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ. ಘಟನೆಯಿಂದಾಗಿ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಆಟೋ, ಖಾಸಗಿ ವಾಹನಗಳು ಹೊರತುಪಡಿಸಿ ಸಂಚಾರದಲ್ಲಿಯೂ ವ್ಯತ್ಯಯ ಕಂಡು ಬಂದಿದೆ. ಪೊಲೀಸರು ಹಂತಕರ ಪತ್ತೆ ಹಚ್ಚುವ ಕೆಲಸ ನಡೆಸಿದ್ದಾರೆ. ಈತ 2020ರಲ್ಲಿ ಮಹ್ಮದ್ ಫಾಸಿಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ.