ಪ್ರಜಾಸ್ತ್ರ ಸುದ್ದಿ
ನಾಗ್ಪುರ(Nagpura): ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಗುರುತು ಪತ್ತೆ ಹಚ್ಚಿದ್ದಾರೆ. ಮಹಾರಾಷ್ಟ್ರದ ಗೊಂಡಿಯಾ ಮೂಲದ 35 ವರ್ಷದ ಜಗದೀಶ್ ಉಯ್ಕೆ ಎಂದು ಗುರುತಿಸಲಾಗಿದೆ. ಈತ ಈ ಹಿಂದೆ ಭಯೋತ್ಪಾದನೆ ಕುರಿತು ಪುಸ್ತಕ ಬರೆದಿದ್ದು, 2021ರಲ್ಲಿ ಬಂಧಿಸಲಾಗಿತ್ತು. ಇವನ ಇ-ಮೇಲ್ ಗಳನ್ನು ಪತ್ತೆ ಹಚ್ಚಿದ ಬಳಿಕ ತಲೆ ಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 21ರಂದು ರೈಲ್ವೆ ಸಚಿವ ಅಶ್ವಿನಿವೈಷ್ಣವ್ ಅವರಿಗೆ ಇಮೇಲ್ ಕಳಿಸಿದ್ದ. ಇದನ್ನು ಡಿಜಿಪಿ, ಆರ್ ಪಿಎಫ್ ಗೆ ಕಳಿಸಲಾಗಿದೆ. ರೈಲು ನಿಲ್ದಾಣಗಳಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಇತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸೋಮವಾರ ಸುಮಾರು 60ಕ್ಕೂ ಹೆಚ್ಚು ವಿಮಾನ ಸಂಸ್ಥೆಗಳಿಗೆ ಬೆದರಿಕೆ ಕರೆ ಬಂದಿವೆ. ಅಕ್ಟೋಬರ್ 28ರ ವರೆಗೂ ಅಂದರೆ 15 ದಿನಗಳಲ್ಲಿ 410