ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಮಣಿಪುರದಲ್ಲಿ ನಡೆಯುತ್ತಿರುವ ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವಿನ ಸಂಘರ್ಷವನ್ನು ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷಗಳು ರಾಜ್ಯಸಭೆಯಲ್ಲಿ ವಾಗ್ದಾಳಿ ನಡೆಸಿದವು. ಹೀಗಾಗಿ ಇಲ್ಲಿ ರಾಷ್ಟ್ರಪತಿ ಆಡಳಿತ ನಡೆಸಬೇಕು ಎನ್ನುವ ಅಂಗೀಕಾರಕ್ಕೆ ಬರಲಾಗಿದೆ. ಶುಕ್ರವಾರ ರಾಷ್ಟ್ರಪತಿ ಆಳ್ವಿಕೆ ಜಾರಿ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಇಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಹಿಂಸಾಚಾರವನ್ನು ತಡೆಗಟ್ಟುವಲ್ಲಿಯೂ ಕೇಂದ್ರ ಸರ್ಕಾರ ಸಂಪೂರ್ಣ ಸೋತಿದೆ. ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು.