ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಭಾನುವಾರ ಚಾಲನೆ ನೀಡಿದರು. ರಾಗಿಗುಡ್ಡ ನಿಲ್ದಾಣದಲ್ಲಿ ಹಸಿರು ಬಾವುಟ ತೋರಿಸುವ ಮೂಲಕ ನೂತನ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥವಾರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸಚಿವರು ಉಪಸ್ಥಿತರಿದ್ದರು.
ಹಳದಿ ಮಾರ್ಗ 19.15 ಕಿಲೋ ಮೀಟರ್ ಉದ್ದವಿದೆ. ಈ ಮೂಲಕ ನಮ್ಮ ಮೆಟ್ರೋ ಉದ್ದ 96 ಕಿಲೋ ಮೀಟರ್ ಗೆ ವಿಸ್ತರಣೆಯಾಗಿದೆ. ಇದರಲ್ಲಿ ಒಟ್ಟು 16 ಮಾರ್ಗಗಳು ಇವೆ. ಬೊಮ್ಮಸಂದ್ರ, ಹೆಬ್ಬಗೂಡಿ, ಹುಸ್ಕೂರು ರಸ್ತೆ, ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಬೆರಟೇನ್ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕೂಡ್ಲಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿಗುಡ್ಡ ಹಾಗೂ ಆರ್.ವಿ ರಸ್ತೆವರೆಗೂ ಸಂಚಾರ ನಡಸಲಿದೆ.