Ad imageAd image

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಮಹತ್ವವಾಗಿದೆ: ಶಾಸಕ ವಿಠ್ಠಲ ಕಟಕದೊಂಡ

Nagesh Talawar
ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಮಹತ್ವವಾಗಿದೆ: ಶಾಸಕ ವಿಠ್ಠಲ ಕಟಕದೊಂಡ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಸಂವಿಧಾನದ ಮುಂದೆ ದೇಶದ ಎಲ್ಲ ಪ್ರಜೆಗಳು ಸಮಾನರು ಎಂಬ ಸಮಾನತೆ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಮಹತ್ವದಾಗಿದೆ ಎಂದು ಶಾಸಕ ವಿಠ್ಠಲ ಧೋಂಡಿಬಾ ಕಟಕಧೋಂಡ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ನಗರದ ಕಂದಗಲ್ ಹನುಮಂತರಾಯರ ರಂಗಮಂದಿರದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನನ್ನ ಮತ ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಅನೇಕ ದೇಶಗಳಲ್ಲಿ ಹಂತ ಹಂತವಾಗಿ ಸಂವಿಧಾನ ಜಾರಿಗೆ ಬಂದು ಅಲ್ಲಿನ ಜನತೆಗೆ ಸಮಾನತೆ ದೊರಕಲು ದೀರ್ಘ ಕಾಲ ಪಡೆಯಿತು. ಆದರೆ, ವಿವಿಧತೆಯಲ್ಲಿ ಏಕತೆವಿರುವ ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ಆಧಾರದ ಸಂವಿಧಾನ ಜಾರಿಗೆ ಬಂದ ದಿನದಿಂದಲೇ ಪ್ರತಿಯೊಬ್ಬರಿಗೂ ಸಮಾನತೆ ದೊರೆತಿದೆ ಎಂದು ಅವರು ಹೇಳಿದರು.

ಸರ್ವರ ಏಳ್ಗೆಯ ಅಂಶಗಳನ್ನು ಹೊಂದಿರುವ ಪ್ರಜಾಪ್ರಭುತ್ವದ ಸಂವಿಧಾನದ ಆಶಯಗಳನ್ನು ಸಾರ್ವಜನಿಕರು ಅರಿತುಕೊಂಡು ತಮ್ಮ ಹಕ್ಕು ಪಡೆದುಕೊಳ್ಳುವುದರೊಂದಿಗೆ ದೇಶದ ಪರ ತಮ್ಮ ಕರ್ತವ್ಯಗಳನ್ನು ನಿಭಾಯಿಸಲು ಕಟಿಬದ್ಧವಾಗಿರಬೇಕು ಎಂದು ಅವರು  ತಿಳಿಸಿದರು. ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಮಾತನಾಡಿ, ಪ್ರಜಾಪ್ರಭುತ್ವದ ತತ್ವಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಸರ್ಕಾರ, ಕಾನೂನುಗಳು ಸಂವಿಧಾನದ ಚೌಕಟ್ಟಿನಲ್ಲಿ ನಿರ್ಮಾಣವಾಗುತ್ತವೆ. ಇಲ್ಲಿ ಎಲ್ಲರೂ ಸಮಾನ, ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿರುವ ನಮ್ಮ ಪ್ರಜಾಪ್ರಭುತ್ವದ ತತ್ವಗಳನ್ನು ಕೇವಲ ಒಂದೇ ದಿನಕ್ಕೆ ಸಿಮಿತಗೊಳಿಸಿದೆ ಪ್ರತಿದಿನವು ಚಾಚುತಪ್ಪದೆ ಪಾಲಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪಿಸಿ, ಸಮಾನತೆಯ ಸಂದೇಶವನ್ನು ಸಾರಿದರು. ಜಗತ್ತಿನಾದ್ಯಂತ ಪ್ರಖ್ಯಾತಿ ಪಡೆದಿರುವ ಅನುಭವ ಮಂಟಪ ನಮ್ಮ ಕರ್ನಾಟಕದಲ್ಲಿರುವುದು ನಮ್ಮ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು. ಡಾ.ಮಂಜುನಾಥ ಕೋರಿ ಅವರು ಉಪನ್ಯಾಸ ನೀಡಿದರು. ಇದಕ್ಕೂ ಮೊದಲು ಸೈಕಲ್ ಜಾಥಾ ನಡೆಸಲಾಯಿತು.

ಕಾರ್ಯಕ್ರಮದಲ್ಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಣ್ಣಗೌಡ ಹಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ,  ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೀರಯ್ಯ ಸಾಲಿಮಠ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಗೋಣಸಗಿ, ಮುಖಂಡರುಗಳಾದ ವಿದ್ಯಾವತಿ ಅಂಕಲಗಿ, ಅಡಿವೆಪ್ಪ ಸಾಲಗಲ, ಸಿದ್ದು ರಾಯಣ್ಣವರ, ಅಭಿಷೇಕ ಚಕ್ರವರ್ತಿ, ಭೀಮರಾಯ ಜಿಗಜಿಣಗಿ, ಸಂತೋಷ ಶಹಾಪೂರ, ವಿನಾಯಕ ಗುಣಸಾಗರ, ಅಶೋಕ ಚಲವಾದಿ, ಚೆನ್ನು ಕಟ್ಟಿಮಣಿ, ಮಲ್ಲಿಕಾರ್ಜುನ ಬಟಗಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article