ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಆದೇಶ ನೀಡಿದ್ದಾರೆ. ಇದನ್ನು ಖಂಡಿಸಿ ಈಗಾಗ್ಲೇ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೆಪಿಸಿಸಿ(KPCC) ವತಿಯಿಂದಲೇ ಪ್ರತಿಭಟನೆಗೆ ಕರೆ ನೀಡಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆಗೆ ಕ್ಷಣಗಣನೆ ಶುರುವಾಗಿದೆ. ಕೇಂದ್ರದ ಬಿಜೆಪಿ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ಸಂವಿಧಾನಿಕ ಹುದ್ದೆಗೆ ಅಪಚಾರವೆಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್(Congress) ವಾಗ್ದಾಳಿ ನಡೆಸುತ್ತಿದೆ. ಹೀಗಾಗಿ ಪ್ರಾಸಿಕ್ಯೂಷನ್ ಗೆ ಕೊಟ್ಟಿರುವುದುನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದೆ.
ಇನ್ನು ಬಿಜೆಪಿ(BJP) ಸಹ ಇಂದೇ ಪ್ರತಿಭಟನೆ ಹಮ್ಮಿಕೊಂಡಿದೆ. ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅವರು ತಪ್ಪು ಮಾಡಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ಮತ್ತೆ ಬೇಕಾದರೆ ಅಧಿಕಾರ ವಹಿಸಿಕೊಳ್ಳಲಿ ಎಂದು ಬಿಜೆಪಿ ಹೇಳುತ್ತಿದೆ. ಹೀಗಾಗಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸಹ ಪ್ರತಿಭಟನೆ ಸಿದ್ಧತೆ ಮಾಡಿಕೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಸೋಮವಾರ ಎರಡು ರಾಷ್ಟ್ರೀಯ ಪಕ್ಷಗಳ ರಾಜಕೀಯ ಕೆಸರೆರಚಾಟ ಭರ್ಜರಿಯಾಗಿ ನಡೆಯಲಿದೆ. ಇದರ ಜೊತೆಗೆ ಕಾನೂನು ಹೋರಾಟ ಏನು ಆಗುತ್ತೆ ಅನ್ನೋ ಕುತೂಹಲ ಸಹ ಇದೆ.