ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ವೇಗವಾಗಿ ಬಂದ ಲಾರಿಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆಎಲ್ಇ ಆಸ್ಪತ್ರೆ ಹತ್ತಿರ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ವೇಗವಾಗಿ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಿಲ್ಲಿದ್ದ ಗಾಯಾಳುಗಳನ್ನು ಹೊರ ತೆಗೆಯಲು ಸಾರ್ವಜನಿಕರು ಸಾಕಷ್ಟು ಪ್ರಯತ್ನಿಸಿದರು. ಕ್ರೇನ್ ಮೂಲಕ ಲಾರಿ ತೆಗೆದು ಅವರನ್ನು ರಕ್ಷಿಸಲಾಯಿತು.