Ad imageAd image

ಇವಿಎಂ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ

Nagesh Talawar
ಇವಿಎಂ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮತಯಂತ್ರಗಳ (EVM) ಬದಲು ಬ್ಯಾಲೆಟ್ ಪೇಪರ್(Ballot Paper) ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ  ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ.

ಈ ಹಿಂದೆ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳ ಸ್ಮರಿಸಿದ ನ್ಯಾಯಾಧೀಶರು, ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗವಲ್ಲವೆಂದು ವಿಭಾಗೀಯ ಪೀಠ ಈ ವೇಳೆ ಅಭಿಪ್ರಾಯಪಟ್ಟಿತು.

ಅರ್ಜಿದಾರರು ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ವಿವಿಧ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು. ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

WhatsApp Group Join Now
Telegram Group Join Now
Share This Article