ಪ್ರಜಾಸ್ತ್ರ ಸುದ್ದಿ
ನವದೆಹಲಿ/ಬೆಂಗಳೂರು(Bengaloru): ಪ್ರಕರಣವೊಂದರ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ್ ಅವರ ಗೋರಿಪಾಳ್ಯ ಪಾಕಿಸ್ತಾನದಲ್ಲಿದೆ ಎನ್ನುವ ಹೇಳಿಕೆ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ(CJI) ಡಿ.ವೈ ಚಂದ್ರಚೂಡ್ ಅವರ ನೇತೃತ್ವದ ಪಂಚಪೀಠ ವಿಚಾರಣೆ ನಡೆಸಿತು. ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನವೆಂದು ಕರೆಯುವಂತಿಲ್ಲ. ವಕೀಲರು, ನ್ಯಾಯಮೂರ್ತಿಗಳು ವೈಯಕ್ತಿಕ ಪೂರ್ವಾಗ್ರಹಗಳನ್ನು ವಿಚಾರಣೆ ವೇಳೆ ತೋರಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೇಗವಾಗಿ ಇಂತಹ ವಿಚಾರಗಳು ಹರಡುತ್ತಿವೆ ಎಂದು ಹೇಳಿದೆ.
ಈಗಾಗ್ಲೇ ಶ್ರೀಶಾನಂದ್(Judge Srishananda) ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಿರುವುದನ್ನು ಗಮನಿಸಿದ ಸುಪ್ರಿಂ ಕೋರ್ಟ್ ವಿಚಾರಣೆಯನ್ನು ಅಂತ್ಯಗೊಳಿಸಿದೆ. ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಹೇಳಬಾರದು. ಇದು ದೇಶದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ. ಹಾಗೇ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡುವಾಗಲೂ ಎಚ್ಚರಿಕೆಯಿಂದ ಇರಬೇಕು. ನ್ಯಾಯ ಹಾಗೂ ನ್ಯಾಯಾಂಗದ ಘಟನೆತೆಯ ಹಿತದೃಷ್ಟಿಯಿಂದ ಸುಮೋಟೋ ಪ್ರಕರಣವನ್ನು ಮುಕ್ತಾಯಗೊಳಿಸಲಾಗುತ್ತಿದೆ ಎಂದು ಹೇಳಲಾಗಿದೆ.