ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕಳೆದ ಸೆಪ್ಟೆಂಬರ್ 27ರಂದು ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಕಾಲ್ತುಳಿತ ಉಂಟಾಗಿ 41 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಇದೀಗ ಸಿಬಿಐಗೆ ವಹಿಸಿದೆ. ಘಟನೆಯ ತನಿಖೆಗಾಗಿ ಮದ್ರಾಸ್ ಹೈಕೋರ್ಟ್ ಎಸ್ಐಟಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ವಿಜಯ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಎನ್.ವಿ ಅಂಜಾರಿಯಾ, ಜೆ.ಕೆ ಮಹೇಶ್ವರಿ ಅವರಿದ್ದ ಪೀಠ ತನಿಖೆಯನ್ನು ಸಿಬಿಐಗೆ ವಹಿಸಿ ಸೋಮವಾರ ತೀರ್ಪು ನೀಡಿದೆ. ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ತ್ರಿಸದಸ್ಯ ಪೀಠ ತನಿಖೆಯ ಮೇಲ್ವಿಚಾರಣೆ ನಡೆಸಲಿದೆ ಎಂದು ತಿಳಿಸಿದೆ.