ಪ್ರಜಾಸ್ತ್ರ ಸುದ್ದಿ
ಬೀದರ(Bidara): ರಂಜಾನ್ ಹಬ್ಬದ ಪ್ರಯುಕ್ತ ಸ್ವಂತ ಊರ ಕೊಪ್ಪಳಕ್ಕೆ ಹೋಗಿದ್ದ ಎರಡನೇ ಹೆಚ್ಚುವರಿ ಸಿವಿಲ್ ಹಾಗೂ ಎರಡನೇ ಜೆಎಂಎಫ್ ಸಿ ಜಿಲ್ಲಾ ನ್ಯಾಯಾಧೀಶ ಎಂ.ಡಿ ಶಾಹಿಜ್ ಅವರ ಮನೆಯಲ್ಲಿ ಕಳ್ಳತನ ನಡೆಸಲಾಗಿದೆ. ನ್ಯಾಯಾಂಗ ವಸತಿ ಗೃಹದಲ್ಲಿ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಮನೆ ಕೆಲಸದಾಕೆ ಏಪ್ರಿಲ್ 1ರಂದು ಮನೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ.
ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತ ಮಾಡಿಕೊಂಡು ಮನೆಯ ಹಿಂದಿನಿಂದ ಬಂದ ನಾಲ್ವರು ಕಳ್ಳರು ಕಳ್ಳತನ ಮಾಡಿದ್ದಾರೆ. ಕಳ್ಳರು ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯೂ ಟನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಲಾಗಿದೆ.