ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಿಲ್ಲು ಸಾಂಸ್ಥಿಕ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಬುಡ ದುರ್ಬಲಗೊಳಿಸಲು ಬಿಜೆಪಿ ನೋಡುತ್ತಿದೆ. ವಿಪಕ್ಷಗಳಿಗೆ ಬೆದರಿಕೆ ಹಾಕುವುದನ್ನು ನೋಡಿದರೆ ಬಿಜೆಪಿಯ ಭಯ ತೋರಿಸುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನ್ಯಾಷನಲ್ ಹೆರಾಲ್ಡ್ ಕೇವಲ ಒಂದು ಪತ್ರಿಕೆಯಲ್ಲ. ಸ್ವಾತಂತ್ರ್ಯ ಹೋರಾಟದ ಸಂಕೇತ. ಆ ಪರಂಪರೆಯನ್ನು ಅಳಿಸಿ ಹಾಕಲು ಬಿಜೆಪಿಗೆ ಸಾಧ್ಯವಿಲ್ಲ. ಎಫ್ಐಆರ್ ದಾಖಲಿಸಿರುವುದು ಬಿಜೆಪಿಯ ದ್ವೇಷ ರಾಜಕಾರಣದ ಮುಂದುವರೆದ ಭಾಗವಾಗಿದೆ.




