ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದ ಮೂವರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಕಾರ್ತಿಕ ವಿಶ್ವ ರಾಠೋಡ(07), ಶಿವಮ್ಮ ರಾಜು ರಾಠೋಡ(08) ಹಾಗೂ ಸ್ವಪ್ನಾ ರಾಜು ರಾಠೋಡ(12) ಮೃತ ಮಕ್ಕಳಾಗಿದ್ದಾರೆ.
ಕುರಿಗಳ ಹತ್ತಿರ ಮಕ್ಕಳು ಆಟವಾಡುತ್ತಿದ್ದರು. ಹೀಗಾಗಿ ಕುಟುಂಬಸ್ಥರು ಅತ್ತ ಕಡೆ ಗಮನಿಸಿಲ್ಲ. ಆದರೆ, ಸುಮಾರು ಹೊತ್ತು ಆದರೂ ಮಕ್ಕಳು ಬಾರದೆ ಇರುವುದರಿಂದ ಹುಡುಕಾಟ ನಡೆಸಿದ್ದಾರೆ. ಅನುಮಾನ ಬಂದು ಕೃಷಿಹೊಂಡದಲ್ಲಿ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.