ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ(Shivamogga): ಮರಕ್ಕೆ ಗೂಡ್ಸ್ ವಾಹನವೊಂದು ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಮೃತಪಟ್ಟ ದಾರುಣ ಘಟನೆ ಗೊಂದಿ ಚಟ್ನಿಹಳ್ಳಿ ಗ್ರಾಮದ ಹತ್ತಿರ ನಡೆದಿದೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿದ್ದೆ ಮಂಪರಿನಲ್ಲಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಫೈರೋಜ್(33), ಸಾಧಿಕ್(31) ಹಾಗೂ ಅಸಾದುಲ್ಲ(35) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿಕೊಂಡು ಹೋಗುವಾಗ ಅಪಘಾತ ನಡೆದಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಗಾಯಗೊಂಡಿರುವ ಚಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.




