ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಬುಧವಾರ ಮುಂಜಾನೆ ಕಾರೊಂದು ಅಪಘಾತವಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ತೆಕ್ಕಲಕೋಟೆ ಪಟ್ಟಣದ ದೇವಿನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 150ರ ಬಳಿ ನಡೆದಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್(75), ಸಿರಗುಪ್ಪ ಗ್ರಾಮದ ವಿಜಯ್(70), ಸಂಧ್ಯಾ(35) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ನಿಟ್ಟೂರಿನ ಪದ್ಮಾ(70), ಸಿರುಗುಪ್ಪದ ಬ್ರಹ್ಮೇಶ್ವರರಾವ್(45) ಗಂಭೀರವಾಗಿ ಯಾಗೊಂಡಿದ್ದು, ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿ ವಾಪಸ್ ಊರಿಗೆ ಬರುವಾಗ ಈ ದುರಂತ ನಡೆದಿದೆ. ದಟ್ಟ ಮಂಜಿನಿಂದಾಗಿ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.




