ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿತ್ಯ ಹಲವು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಂಗಳವಾರ ಮುಂಜಾನೆ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಓಬಳಾಪುರ ಗೇಟ್ ಹತ್ತಿರ ನಡೆದಿದೆ. ಮಧುಗಿರಿ ಕಡೆ ಹೋಗುವಾಗ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಮಧುಗಿರಿ ತಾಲೂಕಿನ ಗೊಂದಿಹಳ್ಳಿ ಗ್ರಾಮದ ಶಾಖೀರ್ ಹುಸೇನ್ (48), ಮಮ್ತಾಜ್(38) ಹಾಗೂ ಮಹ್ಮದ್ ಆಸೀಫ್(12) ಮೃತ ದುರ್ದೈವಿಗಳು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.