ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitrdurga): ಇನೋವಾ ಕಾರಿನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣಕ್ಕೆ ಕಾರು ಸಿಗದೆ ಭೀಕರವಾಗಿ ಅಪಘಾತಗೊಂಡಿದೆ. ಇದರಿಂದಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಗರದ ಹೊರವಲಯದ ಸೀಬಾರದ ಗೋಶಾಲೆ ಹತ್ತಿರ ಅಪಘಾತ ನಡೆದಿದೆ. ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡು ಮೂಲದ ಅರ್ಜುನ್, ಸರವಣ ಹಾಗೂ ಶ್ರೀಧರ ಮೃತ ದುರ್ದೈವಿಗಳು. ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾಕ್ಕೆ ಪ್ರವಾಸಕ್ಕೆ ಹೊರಟಿದ್ದರು. ದಾರಿ ಮಧ್ಯ ಅಪಘಾತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.