ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ತಿಕೋಟಾ ತಾಲೂಕಿನ ಕಬ್ಬಿನ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತಿಕೋಟಾ ತಾಲೂಕಿನ ರತ್ನಾಪುರ ಕ್ರಾಸ್ ಹತ್ತಿರ ಅಪಘಾತ ನಡೆದಿದೆ. ದಾನಪ್ಪ ಹಡಪದ(30) ಹಾಗೂ ಸೋಮು ಕನಮಡಿ(38) ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮದೇವರಹಟ್ಟಿ ಹಾಗೂ ಬಾಬಾನಗರ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದರೂ ಯಾರೂ ಸಹಾಯಕ್ಕೆ ಬಂದಿಲ್ಲ ಎಂದು ಹೇಳಲಾಗುತ್ತಿದೆ. ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.