ಪ್ರಜಾಸ್ತ್ರ ಸುದ್ದಿ
ತಿಕೋಟಾ(Tikota): ತಾಲೂಕಿನ ಘೋಣಸಗಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು. ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷರಾದ ಗುರುಪಾದಗೌಡ ಸಿದ್ದನಗೌಡ ದಾಶ್ಯಾಳ ಅವರು ಮಾತನಾಡಿ, ಸರ್ಕಾರದ ಗ್ಯಾರೆಂಟಿ ಯೋಜನೆಗಳು ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಮುಖ್ಯ ಪಾತ್ರ ವಹಿಸಿವೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಯಶಸ್ವಿಗೊಳಿಸುವಲ್ಲಿ ಹಾಗೂ ಅತಿ ಹೆಚ್ಚು ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿರುವ ಸಂಸ್ಥೆಯಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು “ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂದರು.
ರಾಜ್ಯದಲ್ಲಿಯೇ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದಲ್ಲಿ ತಿಕೋಟಾ ತಾಲೂಕು ಪ್ರಥಮ ಸ್ಥಾನದಲ್ಲಿದೆ. ಈ ಯಶಸ್ಸಿಗೆ ಸಹಕರಿಸಿದ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಅಷ್ಟೇ ಅಲ್ಲದೆ ಬೇರೆ ಬೇರೆ ರಾಜ್ಯಗಳೂ ಕೂಡ ನಮ್ಮ ಗ್ಯಾರೆಂಟಿ ಯೋಜನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದರು.
ಈ ವೇಳೆ ತಾಲೂಕು ಯೋಜನಾಧಿಕಾರಿ ಆಯೇಷಾ ಸಾಲೋಟಗಿ, ಗ್ಯಾರೆಂಟಿ ಯೋಜನೆಗಳ ತಾಲೂಕು ಮಟ್ಟದ ಸಮಿತಿಯ ಸದಸ್ಯರಾದ ಗಂಗೂಬಾಯಿ ಮಡದಾನ, ಮುತ್ತು ಹಿರೇಮಠ, ದಿಲೀಪ ತಳವಾರ, ಶಿವಾನಂದ ಹಂಜಗಿ, ಗೈಬಿಲಾಲ ಮುಜಾವರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಮಲಾಬಾಯಿ ಅಂಜನಾ ಪವಾರ, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸದಾಶಿವ ಭೂಯಿನ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವಿಷಯ ನಿರ್ವಾಹಕರಾದ ರೀತಾ ಮೌರ್ಯ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜೆ.ಎಸ್.ಬಿರಾದಾರ, ಅಂಗನವಾಡಿ ಮೇಲ್ವಿಚಾರಕಿ ಕೆ.ಜಿ. ಭೋಸಲೆ, ಕೆಎಸ್ಆರ್ ಟಿಸಿ ಘಟಕ ವ್ಯವಸ್ಥಾಪಕ ಎಸ್.ಎಲ್.ಚವ್ಹಾಣ, ಉದ್ಯೋಗಾಧಿಕಾರಿ ಮುಸ್ತಾಕ ಗುಂಡಬಾವಡಿ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ.ಎಸ್.ದೇಶಮುಖ, ಶಾಖಾಧಿಕಾರಿ ಆರ್.ಎಸ್ ಸಜ್ಜನ, ಆಹಾರ ನಿರೀಕ್ಷಕ ಎಮ್.ಎಂ.ಅಕ್ಕಲಕೋಟ, ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು ಸೇರಿದಂತೆ ಸರ್ವ ಸದಸ್ಯರು ಭಾಗವಹಿಸಿದ್ದರು.