ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ಎರಡು ದಿನಗಳ ಹಿಂದೆ ತಿಮರೋಡಿ ಬಂಧನವಾಗಿದೆ. ಹಿರಿಯಡ್ಕ ಜೈಲಿನಲ್ಲಿದ್ದಾರೆ. ಮಧ್ಯಾಹ್ನ ಮೂರು ಗಂಟೆಗೆ ವಿಚಾರಣೆಯನ್ನು ಮುಂದೂಡಲಾಗಿದೆ. ಮುಂಜಾನೆ 11 ಗಂಟೆಗೆ ವಿಚಾರಣೆ ಆರಂಭವಾದ ವೇಳೆ ಹೆಚ್ಚಿನ ಸಮಯಾವಕಾಶ ಕೇಳಿದ್ದರಿಂದ ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಇವರ ಮೇಲೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ಮುಖಂಡರೊಬ್ಬರು ದೂರು ದಾಖಲಿಸಿದ್ದಾರೆ. ಹೀಗಾಗಿ ತಿಮರೋಡಿ ಬಂಧಿಸಲಾಗಿದೆ.