ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ಸಿಂದಗಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ 52 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 129 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದೆ. 4 ಹಂತಗಳನ್ನು ಪೂರ್ಣಗೊಳಿಸದೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಾಲಾವಕಾಶ ನೀಡಲಾಗಿದೆ.
2024 ಡಿಸೆಂಬರ್ 26ರಿಂದ 2025 ಜನವರಿ 5ರ ತನಕ ಕಾಲಾವಕಾಶ ನೀಡಿ ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಿಂದಗಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.