ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಟಿಪ್ಪರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆ ಸಂಡೂರು ತಾಲೂಕಿನ ಜೈಸಿಂಗಪುರ ಹತ್ತಿರ ನಡೆದಿದೆ. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಕೊಪ್ಪಳ ಸಾರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈನಿಂಗ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಗೆ ಲಾರಿ ಡಿಕ್ಕಿಯಾಗಿ ಈ ದುರಂತ ನಡೆದಿದೆ. ಸ್ಥಳಕ್ಕೆ ಸಂಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.