ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಉದ್ಯಮಿಯೊಬ್ಬರಿಗೆ ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಸಂಬಂಧ ಹಿಂದೂ ಸಂಘಟನೆಯ ಚೈತ್ರಾ ಕುಂದಾಪುರ ಸೇರಿ ಮೂವರು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಯಾಗಿರುವ ಚೈತ್ರಾ ಕುಂದಾಪುರ ನೇರವಾಗಿ ಅಲ್ಲಿಂದ ಬಂದು ಕೋರ್ಟ್ ಮುಂದೆ ಹಾಜರಾಗಿದ್ದಾರೆ.
ಈ ಪ್ರಕರಣ ಸಂಬಂಧ ಜೈಲು ಸೇರಿದ್ದ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಜಾಮೀನು ಬಳಿಕ ಹೊರ ಬಂದಿದ್ದಾರೆ. ಅಚ್ಚರಿ ಎಂಬಂತೆ ಕನ್ನಡದ ಬಿಗ್ ಬಾಸ್ ಸೀಸನ್ 11ರ ಸ್ಪರ್ಧೆಯಾಗಿದ್ದಾರೆ. 50 ದಿನಗಳನ್ನು ಪೂರೈಸಿ ಆಟ ಮುಂದುವರೆಸಿದ್ದು, ನ್ಯಾಯಾಲಯದ ಮುಂದೆ ಹಾಜರಾಗಬೇಕಾದ ಹಿನ್ನಲೆಯಲ್ಲಿ ಅಲ್ಲಿಂದ ನೇರವಾಗಿ ಕೋರ್ಟ್ ಗೆ ಬಂದಿದ್ದಾರೆ.