ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು(Chikkamagaloru): ಬೆಂಗಳೂರಿನ ಸಾಫ್ಟವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 17 ಜನರ ತಂಡವೊಂದು ಆಗುಂಬೆಗೆ ಹೊರಟಿದ್ದ ಬಸ್ ಪಲ್ಟಿಯಾಗಿದೆ. ಇದರಿಂದಾಗಿ ಮೂವರು ಗಾಯಗೊಂಡಿದ್ದಾರೆ. ಕೊಪ್ಪ ತಾಲೂಕಿನ ಸೀಗೋಡು ಬಳಿ ಗುಂಡಿ ಇಳಿದಿದೆ. ಇದರ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದೆ.
ಕಾರ್ತಿಕ್, ಮಧು ಹಾಗೂ ಚೈತ್ರಾ ಎಂಬುವರು ಗಾಯಗೊಂಡಿದ್ದಾರೆ. ಇವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 17 ಸ್ನೇಹಿತರ ತಂಡ ಪ್ರವಾಸ ಕೈಗೊಂಡಿದೆ. ಮಾರ್ಗಮಧ್ಯ ಅಪಘಾತವಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.