ಪ್ರಜಾಸ್ತ್ರ ಸುದ್ದಿ
ಸ್ಯಾಂಡಲ್ ವುಡ್ ನಟ ಯಶ್ ಕೆಜಿಎಫ್ ಸರಣಿ ಚಿತ್ರದ ಬಳಿಕ ಯಾವುದೇ ಸಿನಿಮಾ ಬಂದಿಲ್ಲ. ಈ ಚಿತ್ರದಿಂದ ಸಕ್ಸಸ್ ಇವರನ್ನು ಪ್ಯಾನ್ ಇಂಡಿಯಾ ಸ್ಟಾರ್ ಪಟ್ಟಕ್ಕೇರಿಸಿತು. ಹೀಗಾಗಿ ಯಶ್ ಮುಂದಿನ ಚಿತ್ರ ಟಾಕ್ಸಿಕ್ ಬಗ್ಗೆ ಸಿಕ್ಕಾಪಟ್ಟೆ ಕುತೂಹಲವಿದೆ. ಇಂತಹ ಸಿನಿಮಾ ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಏಕಕಾಲದಲ್ಲಿ ಶೂಟಿಂಗ್ ನಡೆಸುತ್ತಿದೆ. ಈ ಬಗ್ಗೆ ಚಿತ್ರ ತಂಡ ಹೇಳಿಕೊಂಡಿದೆ. ಇದರೊಂದಿಗೆ ಟಾಕ್ಸಿಕ್ ಸಿನಿಮಾ ಹೊಸ ದಾಖಲೆ ಬರೆದಿದೆ ಎಂದು ನಿರ್ಮಾಪಕರು ಹೇಳಿಕೊಂಡಿದ್ದಾರೆ.
ಗೀತು ಮೋಹನದಾಸ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗ್ಲೇ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಿಸಿದೆ. ಕೆವಿಎನ್ ಪ್ರೊಡಕ್ಷನ್ ಹಾಗೂ ಯಶ್ ಒಡೆತನ ಮಾನ್ ಸ್ಟಾರ್ ಮೈಂಡ್ ಕ್ರಿಯೇಷನ್ಸ್ ಸಿನಿಮಾ ನಿರ್ಮಾಣ ಮಾಡುತ್ತಿದೆ. ಟಾಕ್ಸಿಕ್ ಮೂವಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿಯೂ ಡಬ್ ಆಗುತ್ತಿದೆ. ಬಹುತೇಕ ಮುಂದಿನ ವರ್ಷ ಬಿಡುಗಡೆಯಾಗಲಿದೆ.