ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದೀಪಾವಳಿ ಹಬ್ಬದ ರಜೆಯ ಹಿನ್ನಲೆಯಲ್ಲಿ ಏಳು ಪದವಿ ವಿದ್ಯಾರ್ಥಿಗಳು ಪರಿಚಯಸ್ಥರ ಚಿಕ್ಕನಹಳ್ಳಿಯ ಹತ್ತಿರದ ಫಾರ್ಮ್ ಹೌಸ್ ಗೆ ಹೋಗಿದ್ದಾರೆ. ಇದರಲ್ಲಿ ಇಬ್ಬರು ಹುಡುಗಿಯರಿದ್ದರು. ಇವರು ಸ್ವಿಮ್ಮಿಂಗ್ ಮಾಡುತ್ತಿದ್ದರು. ಹುಡುಗರು ಅಂತಾಕ್ಷರಿ ಹಾಡುತ್ತಿದ್ದರು. ಹೊರಗಿನಿದ್ದ ಬಂದು ಯಾರೋ ಬಾಗಿಲು ಬಡೆದಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಹೋಗಿ ತೆಗೆದಿದ್ದಾಳೆ. ಏಕಾಏಕಿ ಬಂದ ಮೂವರು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ. ಹುಡುಗಿಯರ ಫೋಟೋ ತೆಗೆಯಲು ಶುರು ಮಾಡಿದ್ದಾರೆ. ಇದನ್ನು ತಡೆಯಲು ಹೋದ ವಿದ್ಯಾರ್ಥಿಗಳ ಮೇಲೆ ಮರದ ದಿಮ್ಮಿಗಳಿಂದ ಹಲ್ಲೆ ಮಾಡಿದ್ದಾರೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇದರಲ್ಲಿ ಪುನೀತ್ ಎನ್ನುವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿತ್ತು. ಕೆಂಗೇರಿಯ ಖಾಸಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಘಟನೆ ಸಂಬಂಧ ಮುರುಳಿ, ಚಂದ್ರು ಹಾಗೂ ನಾಗೇಶ ಅನ್ನೋ ಮೂವರು ಆರೋಪಿಗಳನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.
ಈ ಘಟನೆ ಅಕ್ಟೋಬರ್ 26ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಸವೇಶ್ವರನಗರದ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದ ವಿದ್ಯಾರ್ಥಿಗಳು ಚಿಕ್ಕನಹಳ್ಳಿಯ ಎಪಿಎಸ್ ಲೇಔಟ್ ನಲ್ಲಿರುವ ಫಾರ್ಮ್ ಹೌಸ್ ಗೆ ಹೋಗಿದ್ದರು. ಈ ವೇಳೆ ಗಲಾಟೆ ನಡೆದು ದುರಂತ ಸಂಭವಿಸಿದೆ.