ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ಕೋರಹಳ್ಳಿ ಗ್ರಾಮದಲ್ಲಿನ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ವರ್ಷ ಹಾಗೂ ಭಾರತ ಸೇವಾದಳ ಸಪ್ತಾಹವನ್ನು ಆಚರಿಸಲಾಯಿತು. ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ತಾಲೂಕು ಸಮಿತಿ ಸಿಂದಗಿ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂದಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಸಪ್ತಾಹ ನಡೆಯಿತು.
ಈ ವೇಳೆ ಮಾತನಾಡಿದ ಶ್ರೀ ಮಲ್ಲಿಕಾರ್ಜುನ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಸ್.ಎಸ್ ಹೀರೆಮಠ, ರಾಷ್ಟ್ರೀಯ ಭಾವೈಕ್ಯತೆ, ಸೇವಾ ಮನೋಭಾವನೆ ಮೂಡಿಸುವ ಭಾರತ ಸೇವಾದಳದ ಕಾರ್ಯ ಶ್ಲಾಘನೀಯ. ಪ್ರತಿಯೊಬ್ಬರಲ್ಲೂ ರಾಷ್ಟ್ರಾಭಿಮಾನ, ಶಿಸ್ತು, ರಾಷ್ಟ್ರೀಯ ಭಾವೈಕ್ಯತೆ, ಸೇವಾ ಮನೋಭಾವನೆ ಹಾಗೂ ನೈತಿಕ ಮೌಲ್ಯಗಳ ಬಗ್ಗೆ ಶಿಕ್ಷಣ ನೀಡುವ ಭಾರತ ಸೇವಾದಳ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಭಾರತ ಸೇವಾದಳ ಸಪ್ತಾಹ ಕಾರ್ಯಕ್ರಮ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ಸೇವಾದಳ ಮಾಹಿತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಹಲವು ರೀತಿಯ ಮಾಹಿತಿ ನೀಡಲಾಯಿತು. ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ, ತಾಲೂಕು ಸಂಘಟಕ ಡಿ.ಸಿ.ಜಾಧವ್ ಅವರು ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ತರಬೇತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಲಲಿತಾ ಬಿರಾದಾರ, ಸೌಮ್ಯ ಕುಂಬಾರ, ವೈಶಾಲಿ ಬೇನೂರ, ಪಿ.ಎಸ್.ಕುಂಬಾರ, ಎಸ್.ಎಸ್.ಕಡಿಮನಿ, ಶಾರದಾ ಖಜೂರಗಿ, ಶಿವಾನಿ ಬನ್ನಿಗಿಡ, ಮಲ್ಲಿನಾಥ ಬನ್ನಿಗಿಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಬಿ.ಎಮ್.ಪಾಸೋಡಿ ನಿರೂಪಣೆ ಹಾಗೂ ವಂದನಾರ್ಪಣೆ ನಡೆಸಿಕೊಟ್ಟರು.




