Ad imageAd image

ಐಪಿಎಸ್ ಅಧಿಕಾರಿಗಳಾದ ನಿಂಬಾಳ್ಕರ್, ಶರತಚಂದ್ರ ವರ್ಗಾವಣೆ

ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಹಾಗೂ ಕೆ.ವಿ ಶರತಚಂದ್ರ ಅವರನ್ನು ವರ್ಗಾವಣೆ

Nagesh Talawar
ಐಪಿಎಸ್ ಅಧಿಕಾರಿಗಳಾದ ನಿಂಬಾಳ್ಕರ್, ಶರತಚಂದ್ರ ವರ್ಗಾವಣೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಹಿರಿಯ ಐಪಿಎಸ್(IPS) ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಹಾಗೂ ಕೆ.ವಿ ಶರತಚಂದ್ರ ಅವರನ್ನು ವರ್ಗಾವಣೆ ಮಾಡಿ ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಪೊಲೀಸ್(Police) ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ ಶರತಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಎಡಿಜಿಪಿ(ADGP) ಅಲೋಕ್ ಕುಮಾರ್ ಅವರು ನೋಡಿಕೊಳ್ಳುತ್ತಿದ್ದ ಸಂಚಾರ ಮತ್ತು ಸುರಕ್ಷತಾ ಮುಖ್ಯಸ್ಥ ಸ್ಥಾನದಿಂದ ಬಿಡುಗಡೆ ಮಾಡಲಾಗಿದೆ. ಇದನ್ನು ಶರತಚಂದ್ರ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

WhatsApp Group Join Now
Telegram Group Join Now
TAGGED:
Share This Article