ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಹಾಗೂ ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದರು. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಸಿಆರ್ ಪಿಎಫ್ ಯೋಧರ ಬಲಿದಾನವನ್ನು ಸ್ಮರಿಸಿದ್ದಾರೆ.
ಅವರ ದೇಶಭಕ್ತಿ, ರಾಷ್ಟ್ರಕ್ಕೆ ಸಲ್ಲಿಸಿದ ಸೇವೆ ನಮ್ಮ ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಭಾರತೀಯರು ಅವರ ಧೈರ್ಯವನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ. ಫೆಬ್ರವರಿ 14, 2019ರಂದು ಸ್ಫೋಟಕ ತುಂಬಿದ ವಾಹನವೊಂದನ್ನು ಆತ್ಮಹುತಿ ಬಾಂಬರ್ ಕ್ರೇಂದ್ರ ಮೀಸಲು ಪಡೆಯ ಯೋಧರನ್ನು ಕರೆದುಕೊಂಡು ಹೊರಟಿದ್ದ ಬಸ್ಸಿಗೆ ಡಿಕ್ಕಿ ಹೊಡೆಸಿದ. ಇದರ ಪರಿಣಾಮ 40 ಯೋಧರು ಪ್ರಾಣ ಕಳೆದುಕೊಂಡರು.




