ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರ ಶಿವಶಂಕರಪ್ಪನವರ ನಿಧನಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪಟ್ಟಣದ ಪಕ್ಷದ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಮಹಿಳಾ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿ ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರ, ನಗರಸಭೆ ಸದಸ್ಯರಾಗಿ, ಅಧ್ಯಕ್ಷರಾಗಿ, ಕಾಂಗ್ರೆಸ್ ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇಂತಹ ನಾಯಕರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು. ಪುರಸಭೆ ನಾಮನಿರ್ದೇಶಿತ ಸದಸ್ಯ ಸಾಯಿಬಣ್ಣ ಪುರದಾಳ ಮಾತನಾಡಿದರು.




