ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ತಾಲೂಕಿನ ಹೆಗಡಿಹಾಳ ಕ್ರಾಸ್ ಹತ್ತಿರ ನಡೆದಿದೆ. ಜುಮನಾಳ ಗ್ರಾಮದ ಯಮನಪ್ಪ ನಾಟೀಕಾರ(19), ಉತ್ನಾಳದ ಬೀರಪ್ಪ ಗೋಡೆಕರ್(30) ಹಾಗೂ ಹಣಮಂತ ಕಡ್ಲಿಮಟ್ಟಿ(25) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಉಮೇಶ ಭಜಂತ್ರಿ ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೆಎ 28, ಝಡ್ 0379 ನಂಬರಿನ ಮಾರುತಿ ಸುಜುಕಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾಗಿದೆ. ಅತಿಯಾದ ವೇಗವಾಗಿ ಚಲಿಸಿದ್ದೆ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವಿಜಯಪುರ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.