ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಕನ್ನಡ ಮಾತನಾಡಿ. ಮರಾಠಿ ಬರಲ್ಲ ಎಂದಿದ್ದಕ್ಕೆ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪುಂಡರಿಂದ ಹಲ್ಲೆಗೊಳಗಾದ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಬಸ್ಸಿನಲ್ಲಿ ಬಾಲಕಿಯೊಂದಿಗೆ ಅಸಭ್ಯ ವರ್ತಿಸಿದ್ದು, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾರಿಹಾಳ ಪೊಳೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
ಟಿಕೆಟ್ ವಿಚಾರವಾಗಿ ಗಲಾಟೆಯಾಗಿದೆ. ಮರಾಠಿ ಮಾತನಾಡು ಎಂದು ಪುಂಡರು ಗಲಾಟೆ ಮಾಡಿದ್ದಾರೆ. ಪೋನ್ ಮಾಡಿ ಸ್ನೇಹಿತರನ್ನು ಕರೆಸಿಕೊಂಡು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಮಾರಿಹಾಳ ಠಾಣೆ ಪೊಲೀಸರು ಬಾಳು, ಮಾರುತಿ, ರಾಜು ಹಾಗೂ ರಾಹುಲ್ ಎನ್ನುವ ನಾಲ್ವರನ್ನು ಬಂಧಿಸಿದ್ದಾರೆ. ಇವರೆಲ್ಲರೂ ಬಾಳೇಕುಂದ್ರಿ ಗ್ರಾಮದವರು ಎಂದು ತಿಳಿದು ಬಂದಿದೆ. ಇವರ ವಿರುದ್ಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದವು. ಇದೀಗ ನೋಡಿದರೆ ಕಂಡಕ್ಟರ್ ವಿರುದ್ಧ ಪೋಕ್ಸೋ ದೂರು ದಾಖಲಿಸಲಾಗಿದೆ. ಗಲಾಟೆ ಪ್ರಕರಣ ಬೇರೆ ಸ್ವರೂಪ ಪಡೆದಿದ್ದು, ಮುಂದೇನಾಗುತ್ತೆ ಕಾದು ನೋಡಬೇಕಿದೆ.