ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು(Chikkamagaloru): ಕಾಡಿನ ದಾಳಿಗೆ ಇಬ್ಬರು ಬಲಿಯಾದ ಘಟನೆ ಶುಕ್ರವಾರ ಮುಂಜಾನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಹತ್ತಿರ ನಡೆದಿದೆ. ಒಂದೇ ಊರಿನ ಇಬ್ಬರು ಮೃತಪಟ್ಟಿದ್ದಾರೆ. ಕೆರೆಗದ್ದೆಯ ಉಮೇಶ್(43) ಹಾಗೂ ಹರೀಶ್(42) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸಂಬಂಧಿಸಿದಂತೆ ಇವರ ಮನೆಯಿವೆ. ಮನೆಯಿಂದ ಕಾಡಿಗೆ ಸೊಪ್ಪು ತರಲು ಹೋದಾಗ ಆನೆ ದಾಳಿ ಮಾಡಿದೆ. ಇದರಿಂದಾಗಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




