ಪ್ರಜಾಸ್ತ್ರ ಸುದ್ದಿ
ಬಾರಾಮುಲ್ಲಾ(Baramulla): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಉಗ್ರರ(Terrorists) ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಭದ್ರತಾ ಪಡೆ ಹಾಗೂ ಪೊಲೀಸರು ಎನ್ ಕೌಂಟರ್ ನಡೆಸಿ ಇಬ್ಬರು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹತ್ಯೆಯಾದ ಭಯೋತ್ಪಾದಕರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.