ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ವರದಿ ಮಾಡುವುದು ಕಡ್ಡಾಯ ಎಂದು ಸರ್ಕಾರ ಆದೇಶಿಸಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳು ಪೋಕ್ಸೊ ಕಾಯ್ದೆ ಅಡಿಯಲ್ಲಿ ಬರುವ ಎಲ್ಲ ಪ್ರಕರಣಗಳನ್ನು ಕಡ್ಡಾಯವಾಗಿ ವರದಿ ಮಾಡಬೇಕು ಎಂದಿದ್ದಾರೆ.
ಇಂತಹ ವಿಷಯದಲ್ಲಿ ಸರ್ಕಾರ ಯಾವುದೇ ನಿರ್ಲಕ್ಷ್ಯ ಅಥವ ಕಾನೂನು ಉಲ್ಲಂಘನೆ ಸಹಿಸುವುದಿಲ್ಲ. ಆರೋಗ್ಯ ಇಲಾಖೆ ಸ್ಪಷ್ಟ ಮಾರ್ಗಸೂಚಿಗಳನ್ನು ಈಗಾಗ್ಲೇ ಹೊರಡಿಸಿದೆ. ಖಾಸಗಿ ಆಸ್ಪತ್ರೆಗಳು ಅವುಗಳನ್ನು ಪಾಲಿಸಬೇಕು. ತನಿಖೆಗಳಿಗೆ ಸಂಪೂರ್ಣ ಸಹಕಾರ ನೀಡುವುದು ಸಂಬಂಧಪಟ್ಟ ಸಂಸ್ಥೆಯ ಜವಾಬ್ದಾರಿ. ಸಂತ್ರಸ್ತರ ಗೌಪ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಸರಿಯಾದ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ ಎಂದು ಸೂಚನೆ ನೀಡಿದ್ದಾರೆ.




