ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಶೇಕಡ 60ರಷ್ಟು ಕಮಿಷನ್ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ದಾಖಲೆಗಳನ್ನು ಕೊಡಿ. ಸುಮ್ನೆ ಹಿಟ್ ಅಂಡ್ ರನ್ ಹೇಳಿಕೆ ಕೊಡಬೇಡಿ ಎಂದಿದ್ದರು. ಇದಕ್ಕೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹೆಚ್ಡಿಕೆ, ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಹಂಚಿಕೊಂಡಿದ್ದಾರೆ.
ದಾಖಲೆ ಕೊಡಿ ದಾಖಲೆ ಕೊಡಿ ಎನ್ನುತ್ತಿದ್ದೀರಿ. ಇಲ್ನೋಡಿ ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಖೊಟ್ಟಿ ಗ್ಯಾರೆಂಟಿ ಸರ್ಕಾರದ ಲೂಟಿ ಸಾಕ್ಷಿ ಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ. ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿ, ಜಲ ಸಂಪನ್ಮೂಲ ಇಲಾಖೆ 14,600 ಕೋಟಿ, ಲೋಕೋಪಯೋಗಿ 10 ಸಾವಿರ ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ 3,100 ಕೋಟಿ, ಸಣ್ಣ ನೀರಾವರಿ 2,800 ಕೋಟಿ, ಇತರೆ ಇಲಾಖೆ ಸೇರಿ 1,500 ಕೋಟಿ. ಒಟ್ಟು 32 ಸಾವಿರ ಕೋಟಿ ಬಾಕಿ ಇದೆ ಎಂದು ಸಚಿವರು ಹೇಳಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ.