ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಹಾಲಿನ ದರ 4 ರೂಪಾಯಿ ಏರಿಕೆ ಮಾಡಿರುವ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 2023ರಲ್ಲಿ 3 ರೂಪಾಯಿ, 2024ರಲ್ಲಿ 2 ರೂಪಾಯಿ, 2025ರಲ್ಲಿ 4 ರೂಪಾಯಿ ಏರಿಕೆ ಮಾಡಿದ್ದೀರಿ. ಈ ಮೂಲಕ ಹಾಲು ಹಾಲಹಲ. ಪ್ರತಿ ಯೂನಿಟ್ ವಿದ್ಯುತ್ ಗೆ 36 ಪೈಸೆ ಏರಿಕೆ ಮಾಡಿದ್ದು, ಮಹಾದೇವಪ್ಪನಿಗೂ ಶಾಕು, ಕಾಕಾ ಪಾಟೀಲಗೂ ಶಾಕು ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸ್ಟೈಲ್ ನಲ್ಲಿ ವಾಗ್ದಾಳಿ ನಡೆಸಿದರು.
ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದ್ದು ಲಾಭ ಕೆಎಂಎಫ್ ಹಾಗೂ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ. ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಯಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ. ಇದು ಪ್ರಜಾಪ್ರಭುತ್ವ ಸರ್ಕಾರವಲ್ಲ. ದರ ಏರಿಕೆ, ತೆರಿಗೆ ಹೇರಿಕೆ ಸರ್ಕಾರ. ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆ ಹೋಳಿಗೆ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.