ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ಶಿರಾಡಿ ಘಾಟ್(shiradi ghat) ನಲ್ಲಿ ಗುಡ್ಡ ಕುಸಿತವಾಗಿದ್ದು, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಇತರರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಕೆಸರಿನಲ್ಲಿಯೇ ನಡೆದುಕೊಂಡು ಹೋಗಿ ಸ್ಥಳ ಪರಿಶೀಲನೆ ನಡೆಸಿದರು. ತರೆವು ಕಾರ್ಯಾಚರಣೆ ನಡೆಸಿರುವ ಎಸ್ ಡಿಆರ್ ಎಫ್(SDRF) ತಂಡದೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ರಸ್ತೆ ನಿರ್ಮಾಣಕ್ಕಾಗಿ 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದರಿಂದ ಗುಡ್ಡ(Landslide) ಕುಸಿತಕ್ಕೆ ಕಾರಣವಾಗಿದೆ. 45 ಕಿಲೋ ಮೀಟರ್ ಕಾಮಗಾರಿಯಲ್ಲಿ 35 ಕಿಲೋ ಮೀಟರ್ ಹೆದ್ದಾರಿ ಮುಗಿದಿದೆ. ಎಲ್ಲಿಯೂ ತಡೆಗೋಡೆ ನಿರ್ಮಿಸಿಲ್ಲ. ಅವೈಜ್ಞಾನಿಕವಾಗಿ ಕಾಮಗಾರಿ ಕಂಡು ಬಂದಿದ್ದರಿಂದ ಹೆದ್ದಾರಿ(Highway) ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಮಣ್ಣಿನ ಗುಣಮಟ್ಟ ಪರೀಕ್ಷಿಸಿ ಅದರ ಆಧಾರದ ಮೇಲೆ ಸುರಕ್ಷತಾ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿಲ್ಲ. ಹಣ ಉಳಿಸಿಲು ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡ ಕತ್ತರಿಸಲಾಗಿದೆ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ ಎಂದು ಪ್ರಶ್ನಿಸಿದರು.
ಇಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರ ಸಚಿವ ನಿತಿನ ಗಡ್ಕರಿ ಅವರಿಗೆ ಸರ್ಕಾರದಿಂದ ಪತ್ರ ಬರೆಯಲಾಗುವುದು. ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ದೃಷ್ಟಿಯಿಂದ ಇಂತಹ ವರ್ತನೆಯನ್ನು ಸಹಿಸುವುದಿಲ್ಲವೆಂದು ಹೇಳಿದರು.