ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಳೆದ 7 ದಿನಗಳಿಂದ ಇಂಡಿಗೋ ವಿಮಾನ ಸಂಸ್ಥೆಯ ಸಮಸ್ಯೆ ನಡೆಯುತ್ತಿದೆ. ಹೀಗಾಗಿ ಸೋಮವಾರ 216 ವಿಮಾನಗಳು ರದ್ದಾಗಿವೆ. ಇದರಿಂದಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಿಂದ ಹೊರಡಬೇಕಿದ್ದ ಇಂಡಿಗೋ ವಿಮಾನಗಳು ಹಾರಾಟ ನಡೆಸಿಲ್ಲ.
ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ 62, ಬರಬೇಕಿದ್ದ 65 ವಿಮಾನಗಳು, ದೆಹಲಿ ನಿಲ್ದಾಣದಿಂದ ಹೊರಡಬೇಕಿದ್ದ 75, ಆಗಮಿಸಬೇಕಿದ್ದ 59 ವಿಮಾನಗಳು ರದ್ದಾಗಿವೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿನ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ವಿಮಾನ ನಿಲ್ದಾಣಕ್ಕೂ ಬರುವ ಮೊದಲು ಮಾಹಿತಿ ತಿಳಿದುಕೊಂಡು ಬರಬೇಕೆಂದು ಮನವಿ ಮಾಡಿಕೊಂಡಿದೆ.




