ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಧರ್ಮಸ್ಥಳಕ್ಕೆ ಪ್ರಕರಣದ ತನಿಖೆಯನ್ನು ಎಸ್ಐಟಿ ಪೂರ್ಣಿಗೊಳಿಸುವ ತನಕ ಮಾಹಿತಿಯನ್ನು ಬಹಿರಂಗ ಪಡಿಸುವುದಿಲ್ಲ. ಇದರಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ಅದು ಎಲ್ಲಿಗೆ ಕರೆದುಕೊಂಡು ಹೋಗುತ್ತದೆ ಗೊತ್ತಿಲ್ಲ. ತನಿಖೆ ಶೀಘ್ರದಲ್ಲಿ ಮುಗಿದರೆ ವರದಿ ಶೀಘ್ರದಲ್ಲಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಒಂದು ವಾರದಲ್ಲಿ ತನಿಖೆ ಮಾಡಿ ವರದಿ ನೀಡಿ ಎಂದು ನೀವು ಹೇಳಬಹುದಾದ ವಿಷಯ ಅಲ್ಲ. ತಾರ್ಕಿಕ ಅಂತ್ಯವನ್ನು ಮುಟ್ಟುವ ತನಿಖೆ ನಡೆಸುತ್ತಾರೆ. ಹೀಗಾಗಿ ನಾವು ಸಮಯದ ಚೌಕಟ್ಟು ಹಾಕಲು ಸಾಧ್ಯವಿಲ್ಲ. ಧರ್ಮಸ್ಥಳದ ಧರ್ಮಾಧಿಕಾರಿಯಿಂದ ಹಿಡಿದು ಎಲ್ಲರೂ ಎಸ್ಐಟಿ ತನಿಖೆಯನ್ನು ಸ್ವಾಗತಿಸಿದ್ದಾರೆ ಎಂದು ಹೇಳಿದರು.