ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 7ನೇ ವರ್ಷದ ಪುಣ್ಯತಿಥಿ ಹಿನ್ನಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ನಮನ ಸಲ್ಲಿಸಿದರು. ಸದೈವ್ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.
ಇನ್ನು ಲೋಕಸಭಾ ಸ್ಫೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಜೆ.ಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದು, ಅವರ ರಾಜಕೀಯ ಜೀವನ ಹಾಗೂ ದೇಶಕ್ಕೆ ನೀಡಿದ ಕೊಡುಗೆ ಕುರಿತು ತಮ್ಮ ಎಕ್ಸ್ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದಾರೆ.