ಪ್ರಜಾಸ್ತ್ರ ಸುದ್ದಿ
ಅಫಜಲಪುರ(Afzalpur): ಬೈಕ್ ಅಪಘಾತದಲ್ಲಿ ಪಶುವೈದ್ಯಕೀಯ ಪರೀಕ್ಷಕ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಚಿಂಚೋಳಿ ಸಮೀಪ ನಡೆದಿದೆ. ಕಲ್ಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸಲಗಾರ ಗ್ರಾಮದ ಪಶು ಚಿಕಿತ್ಸಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈಜನಾಥ ಕಲಶೆಟ್ಟಿ (37) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಮೂಲತಃ ಅಫಜಲಪುರ ತಾಲೂಕಿನ ಆನೂರ ಗ್ರಾಮದ ನಿವಾಸಿಯಾಗಿದ್ದ ಅವರು ಕರ್ತವ್ಯ ಸಂಬಂಧ ಪ್ರಯಾಣಿಸುತ್ತಿದ್ದ ವೇಳೆ ಚಿಂಚೋಳಿ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಎರಡು ಗಂಡು ಮಕ್ಕಳು ಹಾಗೂ ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




