ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉಪ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಇಂಡಿಯಾ ಬಣದಿಂದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಬಿ.ಸುದರ್ಶನ್ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಬುಧವಾರ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಇಂಡಿಯಾ ಬಣದಿಂದ ನಾಮಪತ್ರ ಸಲ್ಲಿಕೆಯಾಗಿದೆ.
ಬಿ.ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ ವೇಳೆ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿ ಅನೇಕರು ಹಾಜರಿದ್ದರು. ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ.