ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹತ್ಯೆಗೆ ಸಂಚು ರೂಪಿಸಲಾಗಿದೆ ಅನ್ನೋ ಆಡಿಯೋ ಬಳಿಕ ಇದೀಗ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಮ್ಮದ್ ಪೈಂಗಬರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಅನ್ನೋ ಆರೋಪದ ಮೇಲೆ ಶಾಸಕ ಯತ್ನಾಳ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಏಪ್ರಿಲ್ 15ರಂದು ವಿಜಯಪುರ ಬಂದ್ ಮಾಡಲು ನಿರ್ಧರಿಸಲಾಗಿದೆ. ಅಂದು ಲಕ್ಷಾಂತರ ಸಂಖ್ಯೆಯಲ್ಲಿ ಜನರು ರ್ಯಾಲಿಯಲ್ಲಿ ಸೇರುತ್ತಿದ್ದಾರೆ. ಈ ಬಾರಿ ಅವನದು ಫೈನಲ್ ದಿನ ಎಂದು ಹೇಳಿರುವ ಆಡಿಯೋ ವೈರಲ್ ಆಗಿದೆ.
ಮುಸ್ಲಿಂ ಯುವಕನೊಬ್ಬ ಬಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಪ್ರವಾದಿಗಾಗಿ ನಮ್ಮ ಪ್ರಾಣ ಬಲಿಗಾಗಿ ಸಿದ್ದವಿದ್ದೇವೆ. ಪ್ರವಾದಿ ವಿರುದ್ಧ ಮಾತನಾಡುವವನಿಗೆ ಒಂದೇ ಶಿಕ್ಷೆ ತಲೆ ಕತ್ತರಿಸೋದು ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ. ಆಡಿಯೋ, ವಿಡಿಯೋ ಇದೀಗ ಸಾಕಷ್ಟು ಸಂಚಲನ ಮೂಡಿಸಿದೆ. ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಶಾಸಕ ಯತ್ನಾಳರನ್ನು ಬಿಜೆಪಿ 6 ವರ್ಷ ಉಚ್ಛಾಟನೆ ಮಾಡಿದೆ. ಆದರೂ ಅವರು ವಾಗ್ದಾಳಿ ನಡೆಸೋದು ಮುಂದುವರೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ರಾಮ ನವಮಿ ಕಾರ್ಯಕ್ರಮದ ವೇಳೆ ಪ್ರವಾದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ.