ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): 2025-26ನೇ ಸಾಲಿನ ಮಹಾನಗರ ಪಾಲಿಕೆ ಬಜೆಟ್ ಅಂದಾಜು ಪತ್ರ ತಯಾರಿಸುವ ಸಂಬಂಧ ಜನವರಿ 4, ಶನಿವಾರ ಪೂರ್ವಭಾವಿ ಸಭೆ ಕರೆಯಲಾಗಿದೆ. ಪಾಲಿಕೆ ಮುಖ್ಯ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ 4 ಗಂಟೆಗೆ ಮೊದಲ ಸುತ್ತಿನ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಪಾಲಿಕೆಯ ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಹಾಗೂ ಕೈಗಾರಿಕಾ ಸಂಸ್ಥೆ ಒಕ್ಕೂಟದ ಸದಸ್ಯರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.