Ad imageAd image

ವಿಜಯಪುರ: ಮತದಾರರ ನೋಂದಣಿ, ಸೇರ್ಪಡೆ, ತಿದ್ದುಪಡಿ ಅಭಿಯಾನ ಶುರು

ಭಾರತ ಚುನಾವಣಾ ಆಯೋಗವು ಜನವರಿ 1, 2025 ಅನ್ನು ಅರ್ಹತಾ ಭಾವಚಿತ್ರ ಸಹಿತ ಮತದಾರರ ಪಟ್ಟಿಯ ಪರಿಷ್ಕರಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು,

Nagesh Talawar
ವಿಜಯಪುರ: ಮತದಾರರ ನೋಂದಣಿ, ಸೇರ್ಪಡೆ, ತಿದ್ದುಪಡಿ ಅಭಿಯಾನ ಶುರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಭಾರತ ಚುನಾವಣಾ(Election Commission Of India) ಆಯೋಗವು ಜನವರಿ 1, 2025 ಅನ್ನು ಅರ್ಹತಾ ಭಾವಚಿತ್ರ ಸಹಿತ ಮತದಾರರ(Voter) ಪಟ್ಟಿಯ ಪರಿಷ್ಕರಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲೆಯ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.    ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕಾಗಿ ಆಗಸ್ಟ್ 20, 2024 ರಿಂದ ಅಕ್ಟೋಬರ್ 18, 2024ರವರೆಗೆ ಪ್ರತಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. 1-10-2024ಕ್ಕೆ ನೋಂದಣಿಯಾಗದ ಅರ್ಹ ನಾಗರಿಕರು, ಮುಂಬರುವ ಅರ್ಹತಾ 01-10-2025ರ  ದಿನಾಂಕದಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಸಮಯದಲ್ಲಿ ಮತದಾರರಪಟ್ಟಿಯಲ್ಲಿ ಯಾವುದೇ ರೀತಿಯ ತಿದ್ದುಪಡಿ, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದು ಹಾಕುವ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನದ(Campaign) ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದು ಹಾಕುವಿಕೆಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದು, ಸಾರ್ವಜನಿಕರು ಅರ್ಜಿ ನಮೂನೆ 6 ಮತ್ತು 8ಅನ್ನು ಸಲ್ಲಿಸುವಾಗ ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದು. ಎಲ್ಲಾ ರೀತಿಯ ಚುನಾವಣಾ ಸಂಬಂಧಿತ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ನಲ್ಲಿ ವೋಟರ್ಸ್ ಹೆಲ್ಘ್ಲೈನ್(voter helpline app) ಅಫ್ಲಿಕೇಷನ್ ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಕ್ಟೋಬರ್ 29, 2014 ಮಂಗಳವಾರ ಸಮಗ್ರ ಕರಡು ಮತದಾರರ ಪಟ್ಟಿಯ ಪ್ರಕಟಣೆ, ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತು ನವೆಂಬರ್ 28, 2024 ಗುರುವಾರದವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಯ ಅವಧಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ನಿಗಧಿಪಡಿಸುವ ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಅಭಿಯಾನದ ದಿನಾಂಕಗಳನ್ನು ಹಮ್ಮಿಕೊಳ್ಳಲಾಗುವುದು. ಜನವರಿ 6, 2025 ಸೋಮವಾರದಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಜಿಲ್ಲೆಯ ಅರ್ಹ ಮತದಾರರು ಈ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಕೊಳ್ಳುವ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Group Join Now
Telegram Group Join Now
Share This Article