ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಯುವಕನೊಬ್ಬನಿಗೆ ಚಪ್ಪಲಿ ಏಟು ಬಿದ್ದ ಘಟನೆ ನಗರದಲ್ಲಿ ಸೋಮವಾರ ನಡೆದಿದೆ. ನಗರದ ಬಸ್ ನಿಲ್ದಾಣ ಬಳಿ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬರೂ ಯುವಕನಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ.
ಮಹಿಳೆಗೆ ಕಣ್ಣು ಸನ್ನೆ ಮಾಡಿ, ಅನುಚಿತವಾಗಿ ವರ್ತಿಸಿದ್ದಾನೆ. ಆಗ ಮಹಿಳೆ ಇನ್ನೊಮ್ಮಿ ಮಾಡ್ತೇನು ಎಂದು ಹೇಳಿ ಚಪ್ಪಲಿಯಿಂದ ಹೊಡೆದಿದ್ದಾಳೆ. ಅಸಭ್ಯವಾಗಿ ವರ್ತಿಸಿ ಏಟು ತಿಂದ ಆಸಾಮಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಗಾಂಧಿ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.