ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಇಲ್ಲಿನ ಕೇಂದ್ರ ಕಾರಾಗೃಹದಲ್ಲಿದ್ದ 6 ಕೈದಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಲಾಗಿದೆ. ಸನ್ನಡತೆ ಆಧಾರದ ಮೇಲೆ ಇಬ್ಬರು ಮಹಿಳೆಯರು, ನಾಲ್ವರು ಪುರುಷರು ಸೇರಿದಂತೆ 6 ಜನರನ್ನು ಜೀವಾವಧಿ ಶಿಕ್ಷೆಯ ಅವಧಿಪೂರ್ವ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಬಿ.ಎಂ ಕೊಟ್ರೇಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಾಗೃಹದಲ್ಲಿ ಜುಲೈ 26ರಂದು ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಬಿಡುಗಡೆಯಾದ ಕೈದಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಮುಂದೆ ಜೀವನದಲ್ಲಿ ಒಳ್ಳೆಯ ನಾಗರೀಕರಾಗಿ ಜೀವನ ಸಾಗಿಸಿ ಎಂದು ಶುಭ ಹಾರೈಸಿದರು. ಈ ವೇಳೆ ಜೈಲಿನ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.